Webdunia - Bharat's app for daily news and videos

Install App

ಏನು ಮಾಡ್ತಿರೋ ಗೊತ್ತಿಲ್ಲ, ನಮಗೆ ವಿರಾಟ್ ಕೊಹ್ಲಿ ಬೇಕು: ರೋಹಿತ್ ಶರ್ಮಾ ಸೂಚನೆ

Krishnaveni K
ಸೋಮವಾರ, 18 ಮಾರ್ಚ್ 2024 (10:04 IST)
Photo Courtesy: Twitter
ಮುಂಬೈ: ಮುಂಬರುವ ಟಿ20 ವಿಶ್ವಕಪ್ ತಂಡದಿಂದ ವಿರಾಟ್ ಕೊಹ್ಲಿಯನ್ನು ಹೊರಗಿಡಲಾಗುತ್ತದೆ ಎಂಬ ಸೂಚನೆ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಯ್ಕೆಗಾರರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮೊನ್ನೆಯಷ್ಟೇ ಕೊಹ್ಲಿಯನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಗೆ ಮನಸ್ಸಿಲ್ಲ ಎಂದು  ವರದಿಯಾಗಿತ್ತು. ವಿಶ್ವಕಪ್ ನಡೆಯುವ ಪಿಚ್ ಗಳು ನಿಧಾನಗತಿಯದ್ದಾಗಿರುವುದರಿಂದ ಕೊಹ್ಲಿಗೆ ಇದು ಸೂಟ್ ಆಗಲ್ಲ ಎಂದು ಅವರನ್ನು ಹೊರಗಿಡಲು ಆಯ್ಕೆ ಸಮಿತಿ ತಯಾರಿ ನಡೆಸಿತ್ತು.

ಆದರೆ ರೋಹಿತ್ ಶರ್ಮಾ ಏನು ಮಾಡ್ತಿರೋ ಗೊತ್ತಿಲ್ಲ. ಟಿ20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿ ಇರಲೇಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೇ ಖಡಕ್ ಸಂದೇಶ ಕೊಟ್ಟಿದ್ದಾರೆ ಎನ್ನಲಾಗಿದೆ. ಕೊಹ್ಲಿಯನ್ನು ಹೊರಗಿಡಲು ಅವರ ಮನವೊಲಿಸಲು ರೋಹಿತ್ ಶರ್ಮಾಗೇ ಸೂಚಿಸಲಾಗಿತ್ತು. ಆದರೆ ರೋಹಿತ್ ಇದನ್ನು ತಿರಸ್ಕರಿಸಿದ್ದು, ಕೊಹ್ಲಿ ತಂಡದಲ್ಲಿ ಇರಲೇಬೇಕು ಎಂದು ಹೇಳಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಕೀರ್ತಿ ಆಝಾದ್ ಹೇಳಿದ್ದಾರೆ.

ವಿರಾಟ್ ಕೊಹ್ಲಿಯನ್ನು ಟಿ20 ವಿಶ್ವಕಪ್ ತಂಡದಿಂದ ಹೊರಗಿಡಲಾಗುತ್ತದೆ ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕಳೆದ ಏಕದಿನ ವಿಶ್ವಕಪ್ ನಲ್ಲೂ ಕೊಹ್ಲಿ ನಾಯಕ ರೋಹಿತ್ ಶರ್ಮಾಗೆ ಬಲಗೈ ಬಂಟನಂತಿದ್ದರು. ಕೊಹ್ಲಿಯಿದ್ದರೆ ತಂಡಕ್ಕೆ ಬಲ ಎಂದು ಎದುರಾಳಿಗಳಿಗೂ ಗೊತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments