Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ದಕ್ಷಿಣ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಈ ವೇಳೆ ರೋಹಿತ್ ಶರ್ಮಾ ಕೈಗೆ ಪೆಟ್ಟು ಮಾಡಿಕೊಂಡಿದ್ದು, ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ.
ನೆಟ್ ಪ್ರಾಕ್ಟೀಸ್ ವೇಳೆ ಥ್ರೋ ಡೌನ್ ಸ್ಪೆಷಲಿಸ್ಟ್ ಎಸೆದ ಚೆಂಡು ರೋಹಿತ್ ಮೊಣಕೈಗೆ ತಗುಲಿದ್ದು, ನೋವಿನಿಂದಾಗಿ ಅವರು ಅಭ್ಯಾಸದಿಂದ ಹೊರನಡೆಯಬೇಕಾಯಿತು.
ಇದರಿಂದಾಗಿ ಅವರು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಮೂರು ಟೆಸ್ಟ್ ಪಂದ್ಯಗಳ ಸರಣಿಯಿಂದ ವಿಶ್ರಾಂತಿ ಪಡೆಯಲಿರುವ ರೋಹಿತ್ ಏಕದಿನ ಸರಣಿ ವೇಳೆ ತಂಡದ ಚುಕ್ಕಾಣಿ ಹಿಡಿಯಲಿದ್ದಾರೆ.