ಮುಂಬೈ: ಟೀಂ ಇಂಡಿಯಾ ಟಿ20 ಕ್ರಿಕೆಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರೋಹಿತ್ ಹೆಸರು ಬಲವಾಗಿ ಕೇಳಿಬರುತ್ತಿತ್ತು.
ಇದೀಗ ಬಿಸಿಸಿಐ ರೋಹಿತ್ ರನ್ನು ನಾಯಕರಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ಅಲ್ಲದೆ, ನ್ಯೂಜಿಲೆಂಡ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಲಾಗಿದ್ದು, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಟೀಂ ಇಂಡಿಯಾ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ ವಾಡ್, ಶ್ರೇಯಸ್ ಐಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಇಶಾನ್ ಕಿಶನ್, ವೆಂಕಟೇಶ್ ಐಯರ್, ಯಜುವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಸರ್ ಪಟೇಲ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.