ಸಿಡ್ನಿ: ನೆದರ್ಲ್ಯಾಂಡ್ಸ್ ವಿರುದ್ಧ ಟಿ20 ವಿಶ್ವಕಪ್ ಪಂದ್ಯದಲ್ಲಿ ಇಂದು ಅರ್ಧಶತಕ ಗಳಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಮಾಡಿದ್ದಾರೆ.
ಒಟ್ಟು 39 ಎಸೆತ ಎದುರಿಸಿದ ರೋಹಿತ್ 3 ಸಿಕ್ಸರ್, 4 ಬೌಂಡರಿ ಸಹಿತ 53 ರನ್ ಗಳಿಸಿ ಔಟಾದರು. ಕೊಹ್ಲಿ ಜೊತೆಗೆ ಅರ್ಧಶತಕದ ಜೊತೆಯಾಟವನ್ನೂ ಆಡಿದರು.
ಈ ಇನಿಂಗ್ಸ್ ನಲ್ಲಿ 3 ಸಿಕ್ಸರ್ ಸಿಡಿಸಿದ ರೋಹಿತ್ ಇದೀಗ ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದರು. ಮೊದಲ ಸ್ಥಾನದಲ್ಲಿ 63 ಸಿಕ್ಸರ್ ಸಿಡಿಸಿರುವ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ ಇದ್ದಾರೆ. ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ತಾರೆ ಯುವರಾಜ್ ಸಿಂಗ್ ಇದ್ದಾರೆ. ಯುವಿ 33 ಸಿಕ್ಸರ್ ಸಿಡಿಸಿದ್ದರು.
-Edited by Rajesh Patil