Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ರೋಹಿತ್ ಶರ್ಮಾನೇ ನಾಯಕ: ಭಾರತಕ್ಕೆ ಕಪ್ ಗ್ಯಾರಂಟಿ!

Krishnaveni K
ಗುರುವಾರ, 15 ಫೆಬ್ರವರಿ 2024 (11:05 IST)
Photo Courtesy: Twitter
ಮುಂಬೈ: 2024 ರ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ನಾಯಕತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಅನುಮಾನಗಳಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತೆರೆ ಎಳೆದಿದ್ದಾರೆ.

ಟಿ20 ವಿಶ್ವಕಪ್ ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾರೇ ಮುನ್ನಡೆಸಲಿದ್ದಾರೆ ಎಂದು ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ನಮಗೆ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯ ಉಪನಾಯಕನಾಗಿರಲಿದ್ದಾರೆ ಎಂದೂ ಅವರು ಹೇಳಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಗೆ ಭಾರತ ತಂಡಕ್ಕೆ ನಾಯಕ ಯಾರು ಎಂಬ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ.

ರಾಜ್ ಕೋಟ್ ಮೈದಾನದ ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಜಯ್ ಶಾ, ‘ನಾನು ನಿಮಗೆ ಭರವಸೆ ನೀಡುತ್ತೇನೆ. ವೆಸ್ಟ್ ಇಂಡೀಸ್, ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನ್ನು ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ಬಾರಿ ಭಾರತವೇ ಗೆಲ್ಲಲಿದೆ’ ಎಂದು ಘೋಷಿಸಿದ್ದಾರೆ. ಅವರು ಇಂತಹದ್ದೊಂದು ಘೋಷಣೆ ಮಾಡುವಾಗ ಕಾರ್ಯಕ್ರಮದಲ್ಲಿದ್ದ ರೋಹಿತ್ ಶರ್ಮಾ ಕೂಡಾ ಚಪ್ಪಾಳೆ ತಟ್ಟಿ ಸ್ವಾಗತಿಸಿದ್ದಾರೆ.

ಟಿ20 ವಿಶ್ವಕಪ್ 2024 ಜೂನ್ 1 ರಿಂದ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿದೆ. ಭಾರತ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಜೂನ್ 5 ರಂದು ಆಡಲಿದೆ. ಜೂನ್ 29 ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments