ಮುಂಬೈ: ವಾಂಖೆಡೆ ಮೈದಾನದಲ್ಲಿ ತಮ್ಮ ಹೆಸರಿನ ಸ್ಟ್ಯಾಂಡ್ ಉದ್ಘಾಟನೆ ವೇಳೆ ರೋಹಿತ್ ಶರ್ಮಾ ಅಭಿಮಾನಿ ಜೊತೆ ಗುದ್ಬಿಡ್ತೀನಿ ಎಂದು ಕೀಟಲೆ ಮಾಡಿದ ವಿಡಿಯೋ ವೈರಲ್ ಆಗಿದೆ.
ಟೀಂ ಇಂಡಿಯಾದ ಯಶಸ್ವೀ ನಾಯಕ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಗೌರವಾರ್ಥ ಮುಂಬೈನ ವಾಂಖೆಡೆ ಮೈದಾನದಲ್ಲಿ ಸ್ಟ್ಯಾಂಡ್ ಒಂದಕ್ಕೆ ಅವರ ಹೆಸರಿಡಲಾಗಿದೆ. ಇದರ ಉದ್ಘಾಟನೆ ಕಾರ್ಯಕ್ರಮ ನಿನ್ನೆ ನಡೆಯಿತು.
ಇದರಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು, ಮುಂಬೈ ಇಂಡಿಯನ್ಸ್ ತಂಡ ಸೇರಿದಂತೆ ಗಣ್ಯರು ಸೇರಿದ್ದರು. ರೋಹಿತ್ ಶರ್ಮಾ ಪೋಷಕರೇ ಉದ್ಘಾಟನೆ ಮಾಡಿದ್ದರು.
ಇದಾದ ಬಳಿಕ ರೋಹಿತ್ ಶರ್ಮಾ ಅಭಿಮಾನಿಗಳೊಂದಿಗೆ ಬೆರೆತಿದ್ದಾರೆ. ಈ ವೇಳೆ ತಮ್ಮ ಕಟ್ಟಾ ಅಭಿಮಾನಿ ದೀಪಕ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ದೀಪಕ್ ಬೀಸುತ್ತಿದ್ದರೆ ರೋಹಿತ್ ಗೆ ಎಲ್ಲಿ ತಲೆಗೇ ತಾಕಿಬಿಡುತ್ತೇನೋ ಎಂದು ಭಯವಾಗಿತ್ತು. ಹೀಗಾಗಿ ಫೋಟೋಗೆ ಪೋಸ್ ಕೊಟ್ಟ ಬಳಿಕ ಗುದ್ದಿ ಬಿಡ್ತೀನಿ ಎಂದು ತಮ್ಮದೇ ಶೈಲಿಯಲ್ಲಿ ಅಭಿಮಾನಿಗೆ ಗದರಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.