Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ನಿವೃತ್ತಿ

Krishnaveni K
ಶನಿವಾರ, 24 ಆಗಸ್ಟ್ 2024 (09:05 IST)
Photo Credit: Facebook
ನವದೆಹಲಿ: ಟೀಂ ಇಂಡಿಯಾ ಕಂಡ ಯಶಸ್ವೀ ಆರಂಭಿಕರಲ್ಲಿ ಒಬ್ಬರಾಗಿದ್ದ ಶಿಖರ್ ಧವನ್ ಅಂತಾರಾಷ್ಟ್ರೀಯ ಮತ್ತು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ಶಿಖರ್ ಧವನ್ ಟೀಂ ಇಂಡಿಯಾದ ಯಾವುದೇ ಫಾರ್ಮ್ಯಾಟ್ ಗೆ ಆಯ್ಕೆಯಾಗುತ್ತಿರಲಿಲ್ಲ. ವೈಯಕ್ತಿಕ ಜೀವನದಲ್ಲೂ ವಿಚ್ಛೇದನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಗಬ್ಬರ್ ಸಿಂಗ್ ಐಪಿಎಲ್ ನಲ್ಲಿ ಮಾತ್ರ ಆಡುತ್ತಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.

ದುಲೀಪ್ ಟ್ರೋಫಿಗೂ ಅವರು ಆಯ್ಕೆಯಾಗಿರಲಿಲ್ಲ. ಹೀಗಾಗಿ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ. ‘ಅನೇಕ ನೆನಪುಗಳನ್ನು ಹೊತ್ತು ನನ್ನ ವೃತ್ತಿ ಬದುಕಿನ ಪಯಣವನ್ನು ಇಲ್ಲಿಗೆ ಕೊನೆಗೊಳಿಸುತ್ತೇನೆ.  ನಿಮ್ಮೆಲ್ಲರ ಬೆಂಬಲಕ್ಕೆ ನನ್ನ ಧನ್ಯವಾದಗಳು. ಭಾರತಕ್ಕೆ ಆಡುವುದು ನನ್ನ ಕನಸಾಗಿತ್ತು. ಅದು ನನಸಾಗಿತ್ತು. ಇದಕ್ಕೆ ನಾನು ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್, ನನ್ನ ತಂಡ, ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಈಗ ಬದುಕಿನ ಮತ್ತೊಂದು ಪುಟ ತೆರೆಯಲು ಸಮಯವಾಗಿದೆ. ನಾನು ಬಿಸಿಸಿಐ, ಡಿಡಿಸಿಎಗೂ ಅವಕಾಶ ನೀಡಿದ್ದಕ್ಕೆ ಅಭಾರಿಯಾಗಿದ್ದಾನೆ. ಮುಂದೆ ನನ್ನ ದೇಶಕ್ಕಾಗಿ ಆಡಲ್ಲ ಎನ್ನುವುದು ಬೇಸರದ ಸಂಗತಿ. ಆದರೆ ಹಿಂದೆ ನನ್ನ ದೇಶಕ್ಕಾಗಿ ಆಡಿದ್ದೇನೆ ಎಂಬ ಹೆಮ್ಮೆ ನನಗಿರುತ್ತದೆ. ನಾನು ಇಲ್ಲಿಗೆ ನನ್ನ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ವಿದಾಯ ಘೋಷಿಸುತ್ತಿದ್ದೇನೆ’ ಎಂದು ಶಿಖರ್ ಧವನ್ ವಿಡಿಯೋ ಮೂಲಕ ಘೋಷಣೆ ಮಾಡಿದ್ದಾರೆ.

38 ವರ್ಷದ ಶಿಖರ್ ಧವನ್ 34 ಟೆಸ್ಟ್ 7 ಶತಕ ಸೇರಿದಂತೆ 2315 ರನ್, 167 ಏಕದಿನ ಪಂದ್ಯಗಳಿಂದ 17 ಶತಕಗಳೊಂದಿಗೆ 6793 ರನ್, 68 ಟಿ20 ಪಂದ್ಯಗಳಿಂದ 1759 ರನ್ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments