Publish Date: Mon, 20 Jun 2022 (15:59 IST)
Updated Date: Mon, 20 Jun 2022 (16:01 IST)
ಬೆಂಗಳೂರು: ದ.ಆಫ್ರಿಕಾ ವಿರುದ್ಧ ಐದನೇ ಟಿ20 ಪಂದ್ಯ ರದ್ದಾದ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗರಾದ ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಇಂಗ್ಲೆಂಡ್ ವಿಮಾನವೇರಿದ್ದಾರೆ.
ಇಂಗ್ಲೆಂಡ್ ನಲ್ಲಿ ಜುಲೈ 1 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ತಂಡದಲ್ಲಿ ರಿಷಬ್, ಅಯ್ಯರ್ ಸ್ಥಾನ ಪಡೆದಿದ್ದರು. ಹೀಗಾಗಿ ಟೆಸ್ಟ್ ತಂಡವನ್ನು ಕೂಡಿಕೊಳ್ಳಲು ಅಯ್ಯರ್ ಹಾಗೂ ರಿಷಬ್ ಇಂಗ್ಲೆಂಡ್ ಗೆ ಪ್ರಯಾಣಿಸಿದ್ದಾರೆ.
ಈಗಾಗಲೇ ನಾಯಕ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಗೆ ತೆರಳಿ ಅಭ್ಯಾಸ ಆರಂಭಿಸಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾದ ಇನ್ನೊಂದು ತಂಡ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ.