Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಿಡ್ನಿ: ಆಸ್ಟ್ರೇಲಿಯಾದ ವಿಶ್ವ ವಿಖ್ಯಾತ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಅವರ ಹಠಾತ್ ನಿಧನ ನಿಜಕ್ಕೂ ಕ್ರಿಕೆಟ್ ಲೋಕಕ್ಕೆ ಆಘಾತ ತಂದಿದೆ. ಥೈಲ್ಯಾಂಡ್ ನ ಬಂಗಲೆಯೊಂದದರಲ್ಲಿದ್ದ ಶೇನ್ ವಾರ್ನ್ ಹಠಾತ್ ಹೃದಯಾಘಾತಕ್ಕೊಳಗಾಗಿದ್ದರು. ಅವರನ್ನು ಬದುಕಿಸಲು ವೈದ್ಯಕೀಯ ತಂಡ ಶ್ರಮಿಸಿದರೂ ಸಾಧ್ಯವಾಗಿರಲಿಲ್ಲ. ವಿಪರ್ಯಾಸವೆಂದರೆ ಇನ್ನು ಬೆಳಿಗ್ಗೆ ಮಾಜಿ ಕ್ರಿಕೆಟಿಗ ರೋಡ್ ಮಾರ್ಚ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದೇ ಅವರ ಕೊನೆಯ ಸಂದೇಶವಾಗಿತ್ತು.
ಎದುರಾಳಿಗಳಿಗೆ ಸಿಂಹ ಸ್ವಪ್ನರಾಗಿದ್ದ ಶೇನ್ ವಾರ್ನ್ ಟೆಸ್ಟ್ ಕ್ರಿಕೆಟ್ ನಲ್ಲಿ 708 ವಿಕೆಟ್ ಕಬಳಿಸಿ ಜಾಗತಿಕವಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಸಂಪಾದಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದ್ದರು. ಅವರ ನಿಧನಕ್ಕೆ ಕ್ರಿಕೆಟ್ ಲೋಕ ದಿಗ್ಬ್ರಮೆ ವ್ಯಕ್ತಪಡಿಸಿದೆ.