Publish Date: Thu, 29 Sep 2022 (10:38 IST)
Updated Date: Thu, 29 Sep 2022 (10:40 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಟಿ20 ಪಂದ್ಯದಲ್ಲಿ ಅರ್ಧಶತಕ ಗಳಿಸಿ ಭರ್ಜರಿ ಫಾರ್ಮ್ ಮುಂದುವರಿಸಿದ ಟೀಂ ಇಂಡಿಯಾ ಬ್ಯಾಟಿಗ ಸೂರ್ಯಕುಮಾರ್ ಯಾದವ್ ಐಸಿಸಿ ಶ್ರೇಯಾಂಕದಲ್ಲಿ ನಂ.2 ನೇ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಬಳಿಕ ಈಗ ಆಫ್ರಿಕಾ ಸರಣಿಯಲ್ಲೂ ಸೂರ್ಯ ಭರ್ಜರಿ ಫಾರ್ಮ್ ಮುಂದುವರಿಸಿದ್ದಾರೆ. ಇದುವರೆಗೆ ನಾಲ್ಕನೇ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಈಗ ಎರಡು ಸ್ಥಾನ ಮೇಲಕ್ಕೇರಿದ್ದು, ಎರಡನೇ ಸ್ಥಾನ ಗಳಿಸಿದ್ದಾರೆ.
ಈ ಮೂಲಕ ಪಾಕ್ ನಾಯಕ ಬಾಬರ್ ಅಜಮ್ ಮೂರನೇ ಸ್ಥಾನಕ್ಕೆ ಜಾರಿದ್ದಾರೆ. ಮೊದಲ ಸ್ಥಾನದಲ್ಲಿ ಪಾಕ್ ಬ್ಯಾಟಿಗ ಮೊಹಮ್ಮದ್ ರಿಜ್ವಾನ್ ಇದ್ದಾರೆ.