Webdunia - Bharat's app for daily news and videos

Install App

T20 World Cup 2024: ರೋಹಿತ್ ಶರ್ಮಾ ಜೊತೆ ಇಂದು ಆಡಲ್ಲ ವಿರಾಟ್ ಕೊಹ್ಲಿ

Krishnaveni K
ಗುರುವಾರ, 20 ಜೂನ್ 2024 (10:27 IST)
ಬಾರ್ಬಡೋಸ್: ಟಿ20 ವಿಶ್ವಕಪ್ ನಲ್ಲಿ ಕಳಪೆ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಇಂದು ಅಫರ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯುವುದು ಅನುಮಾನವಾಗಿದೆ.

ವಿರಾಟ್ ಕೊಹ್ಲಿ ಕಳೆದ ಮೂರೂ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಕ್ರಮವಾಗಿ 1, 4 ಮತ್ತು ಶೂನ್ಯ ರನ್ ಗಳಿಸಿದ್ದರು. ಇದರಿಂದಾಗಿ ಅವರು ಸಾಕಷ್ಟು ಟೀಕೆಗೊಳಗಾಗಿದ್ದಾರೆ. ಅಲ್ಲದೆ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಲು ಒತ್ತಾಯ ಕೇಳಿಬರುತ್ತಿದೆ.

ಇದರಿಂದಾಗಿ ಈಗ ಕೊಹ್ಲಿ ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಹೀಗಾಗಿ ಅವರು ಮೊನ್ನೆಯಿಂದ ನೆಟ್ಸ್ ನಲ್ಲಿ ಕೊಂಚ ಹೆಚ್ಚೇ ಬೆವರಿಳಿಸುತ್ತಿದ್ದರು. ವಿರಾಟ್ ಕೊಹ್ಲಿ ಸಾಮಾನ್ಯವಾಗಿ ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಆಡುತ್ತಾರೆ. ಆದರೆ ಟಿ20 ವಿಶ್ವಕಪ್ ಗೆ ದಿಡೀರ್ ಆಗಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿದ ಯೋಜನೆ ಫಲಗೂಡಲಿಲ್ಲ.

ಇದರಿಂದಾಗಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಇಂದು ರೋಹಿತ್ ಜೊತೆಗೆ ಕೊಹ್ಲಿ ಬದಲು ರಿಷಬ್ ಪಂತ್ ರನ್ನು ಆರಂಭಿಕರಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಹಾಗಿದ್ದಲ್ಲಿ ಕೊಹ್ಲಿ ಎಂದಿನಂತೆ ತಮ್ಮ ಮೆಚ್ಚಿನ ಮೂರನೇ ಕ್ರಮಾಂಕದಲ್ಲಿ ಆಡಬಹುದಾಗಿದೆ. ಆದರೆ ಆಡುವ ಬಳಗದಲ್ಲಿ ಇಂದು ಬೇರೆ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments