Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಾಂಗ್ಲಾದೇಶ ವಿರುದ್ಧ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಹೀಗಿದೆ

Team India

Krishnaveni K

ಮುಂಬೈ , ಸೋಮವಾರ, 23 ಸೆಪ್ಟಂಬರ್ 2024 (09:57 IST)
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಈಗ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆ ಮಾಡಲಾಗಿದೆ.

ಚೆನ್ನೈನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಅದರಲ್ಲೂ ರವಿಚಂದ್ರನ್ ಅಶ್ವಿನ್್ ತಮ್ಮ ತವರಿನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ತಂಡಕ್ಕೆ ಅಕ್ಷರಶಃ ಆಪತ್ ಬಾಂಧವರಾಗಿದ್ದರು. ಅವರ ಹೊರತಾಗಿ ಶುಬ್ಮನ್ ಗಿಲ್ ಮೊದಲ ಇನಿಂಗ್ಸ್ ನಲ್ಲಿ ವಿಫಲರಾದರೂ ಎರಡನೇ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದರು.

ಈ ಪೈಕಿ ರಿಷಬ್ ಪಂತ್ ಎರಡೂ ಇನಿಂಗ್ಸ್ ನಲ್ಲಿ ಉಪಯುಕ್ತ ಕಾಣಿಕೆ ನೀಡಿದ್ದರು. ಕೆಎಲ್ ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ವಿಫಲರಾದರೂ ಎರಡನೇ ಇನಿಂಗ್ಸ್ ನಲ್ಲಿ ಕೊಂಚ ಚೇತೋಹಾರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಎರಡನೇ ಪಂದ್ಯಕ್ಕೂ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಬ್ಬರೂ ಎರಡೂ ಇನಿಂಗ್ಸ್ ಗಳಲ್ಲಿ ವೈಫಲ್ಯ ಅನುಭವಿಸಿದ್ದರು.

ಇದೀಗ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆ ಮಾಡಲಾಗಿದೆ. ಈ ತಂಡದಲ್ಲೂ ಯಾವುದೇ ಬದಲಾವಣೆಯಿಲ್ಲ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಧ್ರುವ ಜ್ಯುರೆಲ್ (ವಿ.ಕೀ.), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

Share this Story:

Follow Webdunia kannada

ಮುಂದಿನ ಸುದ್ದಿ

ತವರಿನಲ್ಲಿ ಅಬ್ಬರಿಸಿದ ಅಶ್ವಿನ್, ಬಾಂಗ್ಲಾ ತಂಡಕ್ಕೆ ಹೀನಾಯ ಸೋಲು