ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರರಿಗೆ ಕೊಕ್ ನೀಡಲಾಗಿದೆ.
ಟೆಸ್ಟ್ ತಂಡದಿಂದ ಚೇತೇಶ್ವರ ಪೂಜಾರ, ಉಮೇಶ್ ಯಾದವ್ ಗೆ ಕೊಕ್ ನೀಡಲಾಗಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಮೊಹಮ್ಮದ್ ಸಿರಾಜ್ ರನ್ನು ಉಳಿಸಿಕೊಳ್ಳಲಾಗಿದೆ. ಯುವ ಪ್ರತಿಭೆಗಳಾದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ ವಾಡ್, ಮುಕೇಶ್ ಕುಮಾರ್ ಗೆ ಅವಕಾಶ ನೀಡಲಾಗಿದೆ. ಅಚ್ಚರಿಯೆಂದರೆ ಅಜಿಂಕ್ಯಾ ರೆಹಾನೆ ತಂಡದ ಉಪನಾಯಕನ ಪಟ್ಟಕ್ಕೇರಿದ್ದಾರೆ.
ಇನ್ನು ಏಕದಿನ ತಂಡಕ್ಕೆ ಸಂಜು ಸ್ಯಾಮ್ಸನ್ ಪುನರಾಗಮನವಾಗಿದೆ. ಬೌಲಿಂಗ್ ನಲ್ಲಿ ವಿಭಾಗದಲ್ಲಿ ಭಾರೀ ಬದಲಾವಣೆಯಾಗಿದ್ದು ಮುಕೇಶ್ ಕುಮಾರ್, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್ ಗೆ ಸ್ಥಾನ ನೀಡಲಾಗಿದೆ. ಎರಡೂ ತಂಡಗಳಿಗೆ ರೋಹಿತ್ ಶರ್ಮಾ ನಾಯಕರಾಗಿದ್ದಾರೆ.
ಉಳಿದಂತೆ ಎರಡೂ ತಂಡಗಳು ಇಂತಿವೆ:
ಟೆಸ್ಟ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯಾ ರೆಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಆರ್. ಜಡೇಜಾ, ಶ್ರಾದ್ಧೂಲರ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಯದೇವ್ ಉನಾದ್ಕಟ್, ನವದೀಪ್ ಸೈನಿ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ (ಸಂಜು ಸ್ಯಾಮ್ಸನ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶ್ರಾದ್ಧೂಲ್ ಠಾಕೂರ್, ಆರ್. ಜಡೇಜಾ, ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್.