ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದೀಗ ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ಅಭ್ಯಾಸ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ 15 ಸದಸ್ಯರು ಆಡಲು ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮೊದಲು ಭಾರತ ಎರಡು ಅಭ್ಯಾಸ ಪಂದ್ಯಗಳನ್ನು ಆಡಿದೆ. ಈ ಪೈಕಿ ಒಂದು ಸೋತು, ಇನ್ನೊಂದನ್ನು ಗೆದ್ದಿದೆ.
ಕಳೆದ ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಆಡಿರಲಿಲ್ಲ. ಆದರೆ ಈ ಪಂದ್ಯದಲ್ಲಿ ಅವರು ಆಡಲಿದ್ದಾರೆ. ಪ್ರಮುಖ ಟೂರ್ನಿಗೆ ತಯಾರಾಗುವ ದೃಷ್ಟಿಯಿಂದ ಟೀಂ ಇಂಡಿಯಾದ ಎಲ್ಲಾ ಆಟಗಾರರೂ ಆಡಲಿಳಿಯಲಿದ್ದಾರೆ.
-Edited by Rajesh Patil