Publish Date: Thu, 25 Mar 2021 (09:48 IST)
Updated Date: Thu, 25 Mar 2021 (09:49 IST)
ಪುಣೆ: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗರು ಪಾರ್ಟಿ ಮಾಡಿ ಖುಷಿಪಟ್ಟಿದ್ದಾರೆ.
ಪಾರ್ಟಿಯ ಫೋಟೋಗಳನ್ನು ಕೋಚ್ ರವಿಶಾಸ್ತ್ರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಪಾಂಡ್ಯ ಸಹೋದರರು, ಕೆಎಲ್ ರಾಹುಲ್ ಸೇರಿದಂತೆ ಬಹುತೇಕ ಕ್ರಿಕೆಟಿಗರೆಲ್ಲಾ ಲಂಚ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ.
ಶುಕ್ರವಾರ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನೂ ಗೆದ್ದರೆ ಮೂರು ಪಂದ್ಯಗಳ ಏಕದಿನ ಸರಣಿ ಟೀಂ ಇಂಡಿಯಾ ಪಾಲಾಗಲಿದೆ. ಹಿಂದೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಬಯೋ ಬಬಲ್ ಉಲ್ಲಂಘಿಸಿ ರೆಸ್ಟಾರೆಂಟ್ ನಲ್ಲಿ ಊಟಕ್ಕೆ ಹೋಗಿದ್ದು ವಿವಾದವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.