ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ತಮ್ಮ 66 ನೇ ವಯಸ್ಸಿನಲ್ಲಿ ಎರಡನೇ ಮದುವೆಗೆ ಸಿದ್ಧರಾಗಿದ್ದಾರೆ.
ಭಾರತದ ಪರ 16 ಟೆಸ್ಟ್ ಮತ್ತು 13 ಏಕದಿನ ಪಂದ್ಯಗಳನ್ನು ಆಡಿರುವ ಅರುಣ್ ಲಾಲ್ ಸದ್ಯಕ್ಕೆ ಬೆಂಗಾಳ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿರುವ ಅರುಣ್ ಲಾಲ್ ಈಗ ತಮ್ಮ ಗೆಳತಿ ಬುಲ್ ಬುಲ್ ಸಾಹಾ ಮೇ 2 ರಂದು ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳಾಗಿವೆ. ಈಗಾಗಲೇ ಇಬ್ಬರ ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.