Publish Date: Fri, 29 Sep 2023 (08:40 IST)
Updated Date: Fri, 29 Sep 2023 (09:01 IST)
ಮುಂಬೈ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಅಂತಿಮ 15 ಸದಸ್ಯರ ಬಳಗವನ್ನು ಪ್ರಕಟಿಸಲಾಗಿದೆ. ಹೊಸದಾಗಿ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಗಾಯಗೊಂಡಿರುವ ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಬದಲಾಗಿ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಉಳಿದಂತೆ ಇದಕ್ಕೆ ಮೊದಲು ಪ್ರಕಟಿಸಿದ್ದ ಅದೇ ಆಟಗಾರರು ತಂಡದಲ್ಲಿದ್ದಾರೆ.
ಅಂತಿಮ ತಂಡ ಹೀಗಿದೆ.
ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.