ಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಏಕದಿನ ತಂಡಕ್ಕೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಮ್ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಗೆ ನಾಯಕತ್ವ ಸಿಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ.
ಇನ್ನು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಗೆ ನಾಯಕತ್ವ ಒಲಿದಿದೆ. ನಾಯಕತ್ವದ ನಿರೀಕ್ಷೆಯಲ್ಲಿದ್ದ ಹಾರ್ದಿಕ್ ಪಾಂಡ್ಯಗೆ ನಿರಾಸೆಯಾಗಿದೆ. ಹಾರ್ದಿಕ್ ಕೇವಲ ಆಟಗಾರನಾಗಿ ತಂಡದಲ್ಲಿ ಮುಂದುವರಿಯಲಿದೆ. ಅವರಿಂದ ಉಪನಾಯಕತ್ವವನ್ನೂ ಕಿತ್ತುಕೊಳ್ಳಲಾಗಿದ್ದು, ಶುಬ್ಮನ್ ಗಿಲ್ ತಂಡದ ಉಪನಾಯಕರಾಗಲಿದ್ದಾರೆ.
ಇನ್ನು, ಏಕದಿನ ಸರಣಿಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಅವರೇ ಕಮ್ ಬ್ಯಾಕ್ ಮಾಡಿರುವುದರಿಂದ ರಾಹುಲ್ ಗೆ ನಾಯಕತ್ವ ಸಿಕ್ಕಿಲ್ಲ. ಆದರೆ ಬಹಳ ದಿನಗಳ ನಂತರ ಕೆಎಲ್ ರಾಹುಲ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಅವರ ಜೊತೆಗೆ ಶ್ರೇಯಸ್ ಅಯ್ಯರ್ ಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಉಳಿದಂತೆ ಏಕದಿನ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಬ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.