ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.
ಚಹಾ ವಿರಾಮದ ವೇಳೆಗೆ ಭಾರತ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಭಾರತ 250 ರನ್ ಗಳಿಗೆ ಉತ್ತರವಾಗಿ ಆಸೀಸ್ 235 ರನ್ ಗಳಿಗೆ ಆಲೌಟ್ ಆಗಿತ್ತು. ಇದರೊಂದಿಗೆ ಭಾರತಕ್ಕೆ 15 ರನ್ ಗಳ ಅಲ್ಪ ಮುನ್ನಡೆ ಸಿಕ್ಕಿತ್ತು. ಇದೀಗ ಭಾರತದ ಒಟ್ಟು ಮುನ್ನಡೆ 101 ರನ್ ಗೆ ತಲುಪಿದೆ.
ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಉತ್ತಮ ಆರಂಭ ಒದಗಿಸಿದ ಕೆಎಲ್ ರಾಹುಲ್ 44 ರನ್ ಗಳಿಗೆ ವಿಕೆಟ್ ಒಪ್ಪಿಸಿದರೆ, ಮುರಳಿ ವಿಜಯ್ 18 ರನ್ ಗಳಿಗೆ ಔಟಾಗಿ ನಿರಾಸೆ ಮೂಡಿಸಿದರು. ಸದ್ಯಕ್ಕೆ ಕ್ರೀಸ್ ನಲ್ಲಿ 11 ರನ್ ಗಳಿಸಿರುವ ಚೇತೇಶ್ವರ ಪೂಜಾರ ಮತ್ತು 2 ರನ್ ಗಳಿಸಿರುವ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ