ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನವೂ ಟೀಂ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದೆ.
ಮೊದಲ ಇನಿಂಗ್ಸ್ ನಲ್ಲಿ 326 ರನ್ ಗಳಿಗೆ ಆಲೌಟ್ ಆದ ಟೀಂ ಇಂಡಿಯಾ 131 ರನ್ ಗಳ ಮಹತ್ವದ ಮುನ್ನಡೆ ಗಳಿಸಿತು. ಭಾರತದ ಪರ ನಿನ್ನೆ ಅಜೇಯರಾಗುಳಿದಿದ್ದ ನಾಯಕ ಅಜಿಂಕ್ಯಾ ರೆಹಾನೆ 112 ರನ್ ಗಳಿಸಿ ಔಟಾದರೆ ರವೀಂದ್ರ ಜಡೇಜಾ 57 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಬಳಿಕ ರವಿಚಂದ್ರನ್ ಅಶ್ವಿನ್ 14 ರನ್ ಗಳ ಕಾಣಿಕೆ ನೀಡಿದರು.
ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಲ್ಲೇ ಜೋ ಬರ್ನ್ಸ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅವರ ಹಿಂದೆಯೇ ಇನ್ ಫಾರ್ಮ್ ಬ್ಯಾಟ್ಸ್ ಮನ್ ಲಬುಶೇನ್ 28 ರನ್ ಗಳಿಸಿ ಔಟಾಗಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಆಸ್ಟ್ರೇಲಿಯಾ 2 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ. ಅಶ್ವಿನ್ ಮತ್ತು ಉಮೇಶ್ ಯಾದವ್ ತಲಾ 1 ವಿಕೆಟ್ ಕಬಳಿಸಿದ್ದಾರೆ.