ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿದ್ದು, ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇದೆಲ್ಲದಕ್ಕಿಂತ ಹೆಚ್ಚು ಟಾಸ್ ಸಂದರ್ಭದಲ್ಲಿ ಟೀಂ ಇಂಡಿಯಾ ನಾಯಕನಾಗಿ ಧೋನಿ ಆಗಮನ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿತು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ದೀಪಕ್ ಚಹರ್ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಆದರೆ ಟಾಸ್ ಸಂದರ್ಭದಲ್ಲಿ ರೋಹಿತ್ ಶರ್ಮಾ ಬದಲು ಧೋನಿ ನಾಯಕರಾಗಿ ಆಗಮಿಸಿದ್ದು ಎಲ್ಲರಿಗೂ ಅಚ್ಚರಿ ತಂದಿತು. ಈ ಮೂಲಕ ಅದೆಷ್ಟೋ ದಿನಗಳ ನಂತರ ಧೋನಿ ನಾಯಕರಾಗಿ ಕಣಕ್ಕಿಳಿದು ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ. ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ.
ಇದರ ಜತೆಗೆ ಇದುವರೆಗೆ ಆಡಲು ಅವಕಾಶ ಸಿಗದ ಕೆಎಲ್ ರಾಹುಲ್, ಮನೀಶ್ ಪಾಂಡೆ, ಸಿದ್ಧಾರ್ಥ್ ಕೌಲ್, ಶ್ರಾದ್ಧೂಲ್ ಠಾಕೂರ್ ಗೆ ಈ ಪಂದ್ಯದಲ್ಲಿ ಅವಕಾಶ ನೀಡಲಾಗಿದೆ. ಧೋನಿ ನಾಯಕತ್ವವನ್ನು ಮತ್ತೆ ನೋಡಬೇಕೆಂದರೆ ಇಂದಿನ ಪಂದ್ಯವನ್ನು ಮಿಸ್ ಮಾಡದೇ ನೋಡಿ!
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.