Publish Date: Tue, 19 Jul 2022 (08:10 IST)
Updated Date: Tue, 19 Jul 2022 (08:48 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ ಈಗ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಗಳಿಸಿದೆ.
ಬಲಿಷ್ಠ ಇಂಗ್ಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದೆ. ಮೊದಲ ಎರಡು ಸ್ಥಾನಗಳಲ್ಲಿ ಇಂಗ್ಲೆಂಡ್, ನ್ಯೂಜಿಲೆಂಡ್ ತಂಡಗಳಿವೆ.
ಇದೀಗ ಭಾರತ 109 ಪಾಯಿಂಟ್ ಪಡೆದಿದ್ದು, ಮೂರನೇ ಸ್ಥಾನದಲ್ಲಿದೆ. ಅತ್ತ 106 ಪಾಯಿಂಟ್ ಹೊಂದಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ.