Publish Date: Tue, 26 Nov 2019 (09:23 IST)
Updated Date: Tue, 26 Nov 2019 (09:25 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಸೇರಿದಂತೆ ಸತತ ಮೂರು ಟೆಸ್ಟ್ ಸರಣಿಗಳಲ್ಲಿ ವೈಟ್ ವಾಶ್ ಮಾಡಿಕೊಂಡ ಟೀಂ ಇಂಡಿಯಾ ಈಗ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದೆ.
ವೆಸ್ಟ್ ಇಂಡೀಸ್ ಸರಣಿಯಿಂದ ಭಾರತದ ವಿಶ್ವಕಪ್ ಗೆ ಸಮನಾದ ಟೆಸ್ಟ್ ಚಾಂಪಿಯನ್ ಶಿಪ್ ಯಾತ್ರೆ ಆರಂಭವಾಗಿತ್ತು. ಈಗಾಗಲೇ ಮೂರು ಸರಣಿ ಆಡಿರುವ ಭಾರತ ಮೂರನ್ನೂ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದರೊಂದಿಗೆ ಒಟ್ಟು 360 ಅಂಕಗಳೊಂದಿಗೆ ಅಗ್ರ ಸ್ಥಾನ ಕಾಯ್ದುಕೊಂಡಿದೆ.
ವಿಶೇಷವೆಂದರೆ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾಕ್ಕಿಂತ ಭಾರೀ ಮುನ್ನಡೆಯಲ್ಲಿದೆ. ಆಸ್ಟ್ರೇಲಿಯಾ 116 ಅಂಕ ಗಳಿಸಿದೆ. ಹೀಗಾಗಿ ಮುಂಬರುವ ಪಾಕ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದರೂ ಆಸ್ಟ್ರೇಲಿಯಾಗೆ ಟೀಂ ಇಂಡಿಯಾವನ್ನು ಹಿಂದಿಕ್ಕಲಾಗದು.