Publish Date: Sun, 13 Dec 2020 (09:38 IST)
Updated Date: Sun, 13 Dec 2020 (09:40 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆರಂಭಿಕರು ಯಾರು ಎಂಬ ಪ್ರಶ್ನೆಗೆ ಅಭ್ಯಾಸ ಪಂದ್ಯದಲ್ಲಿ ಉತ್ತರ ಸಿಕ್ಕಿದೆ.
ಟೀಂ ಇಂಡಿಯಾ ಪರ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಶಬ್ನಂ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಅಥವಾ ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯೇ ಹೆಚ್ಚು. ಅಭ್ಯಾಸ ಪಂದ್ಯದಲ್ಲಿ ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಉತ್ತಮ ಪ್ರದರ್ಶನ ನೀಡಿದ್ದು, ಆರಂಭಿಕರ ತಲೆನೋವಿಗೆ ಪರಿಹಾರ ನೀಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಬರುವವರೆಗೆ ಭಾರತಕ್ಕೆ ಆರಂಭಿಕರ ತಲೆನೋವಿಗೆ ಪರಿಹಾರ ಸಿಗಲಿದೆ.