ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗ ಪ್ರಕಟಿಸಲಾಗಿದ್ದು, ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್, ವೇಗಿ ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಲಿದ್ದಾರೆ.
ಪೃಥ್ವಿ ಶಾ ಬದಲಿಗೆ ಮಯಾಂಕ್ ಅಗರ್ವಾಲ್ ಜೊತೆ ಶಬ್ನಂ ಗಿಲ್ ಆರಂಭಿಕರಾಗಲಿದ್ದಾರೆ. ಗಾಯಗೊಂಡು ತಂಡದಿಂದ ಹೊರಬಿದ್ದಿರುವ ವೇಗಿ ಮೊಹಮ್ಮದ್ ಶಮಿ ಸ್ಥಾನಕ್ಕೆ ಆಯ್ಕೆಯಾಗಿರುವ ಮೊಹಮ್ಮದ್ ಸಿರಾಜ್ ಚೊಚ್ಚಲ ಪಂದ್ಯವಾಡಲಿದ್ದಾರೆ. ಅಚ್ಚರಿಯೆಂಬಂತೆ ವಿರಾಟ್ ಕೊಹ್ಲಿ ಸ್ಥಾನಕ್ಕೆ ಆಲ್ ರೌಂಡರ್ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ. ಹನುಮ ವಿಹಾರಿಗೆ ಇನ್ನೊಂದು ಅವಕಾಶ ನೀಡಲಾಗಿದ್ದು, ಕೆಎಲ್ ರಾಹುಲ್ ಮತ್ತೆ ತಂಡದಿಂದ ಹೊರಗುಳಿದಿದ್ದಾರೆ.