ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಪಾಕ್ ಪ್ರೇರಿತ ಉಗ್ರರ ದಾಳಿಯ ನಂತರ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.
ಇದರ ಬೆನ್ನಲ್ಲೇ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಸಿಸಿಐ) ಕಾರ್ಯದರ್ಶಿ ಸುರೇಶ್ ಬಾಫ್ನಾ ಮುಂಬರುವ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಪಂದ್ಯವಾಡಬಾರದು ಎಂದು ತಾಕೀತು ಮಾಡಿದ್ದಾರೆ.
40 ಯೋಧರ ಮಾರಣ ಹೋಮವಾದರೂ ಪಾಕ್ ಪ್ರಧಾನಿಯಿಂದ ಒಂದೇ ಒಂದು ಹೇಳಿಕೆ ಬಂದಿಲ್ಲ. ಇದು ಆ ದೇಶದವರು ಈ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ತೋರಿಸುತ್ತದೆ. ಇಂತಹ ದೇಶದ ವಿರುದ್ಧ ರಾಜತಾಂತ್ರಿಕ ಮಾತ್ರವಲ್ಲ, ಕ್ರಿಕೆಟ್ ಸಂಬಂಧವೂ ಇಟ್ಟುಕೊಳ್ಳಬಾರದು ಎಂದು ಸುರೇಶ್ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ