Publish Date: Wed, 02 Mar 2022 (10:15 IST)
Updated Date: Wed, 02 Mar 2022 (10:18 IST)
ಮೊಹಾಲಿ: ಶ್ರೀಲಂಕಾ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಗೆ ಟೀಂ ಇಂಡಿಯಾ ಕ್ರಿಕೆಟಿಗರು ಮೊಹಾಲಿಯಲ್ಲಿ ಸಿದ್ಧತೆ ಆರಂಭಿಸಿದ್ದಾರೆ.
ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಸೇರಿದಂತೆ ಬಹುತೇಕ ಕ್ರಿಕೆಟಿಗರು ಈಗಾಗಲೇ ಮೊಹಾಲಿ ಅಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಅಶ್ವಿನ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ನೆಟ್ಸ್ ನಲ್ಲಿ ಅವರು ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ಗೆ ಲಭ್ಯರಾಗುವ ಸಾಧ್ಯತೆಯಿದೆ. ಮಾರ್ಚ್ 4 ರಿಂದ ಪಂದ್ಯ ಆರಂಭವಾಗಲಿದೆ.