Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ

ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ
ಇಂಧೋರ್ , ಭಾನುವಾರ, 24 ಸೆಪ್ಟಂಬರ್ 2023 (08:40 IST)
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಇಂಧೋರ್ ಮೈದಾನದಲ್ಲಿ ನಡೆಯಲಿದೆ.

ಮೊದಲ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ವಿಶೇಷವಾಗಿ ಪ್ರಮುಖರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶನ ಮಾಡಿತ್ತು. ಆರಂಭಿಕರಾದ ಶುಬ್ಮನ್ ಗಿಲ್, ಋತುರಾಜ್ ಗಾಯಕ್ ವಾಡ್ ಉತ್ತಮ ಬ್ಯಾಟಿಂಗ್ ನಡೆಸಿದ್ದರು.

ಆದರೆ ತಂಡಕ್ಕೆ ಕಮ್ ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್ ಗೆ ಇದುವರೆಗೆ ತಮ್ಮ ಎಂದಿನ ಲಯಕ್ಕೆ ಮರಳಲು ಸಾಧ‍್ಯವಾಗಿಲ್ಲ. ಏಷ್ಯಾ ಕಪ್ ನಲ್ಲಿ ಆಡಿದ್ದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದ ಅವರು ಮೊದಲ ಏಕದಿನ ಪಂದ್ಯದಲ್ಲಿ ದುರಾದೃಷ್ಟವಶಾತ್ ರನೌಟ್ ಆಗಬೇಕಾಯಿತು. ಇಂದು ಅವರಿಗೆ ಮತ್ತೊಂದು ಅವಕಾಶ ಸಿಗಲಿದೆ. ಬಹುತೇಕ ಕಳೆದ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಟೀಂ ಇಂಡಿಯಾ ಇಂದೂ ಕಣಕ್ಕಿಳಿಸುವ ಸಾಧ‍್ಯತೆಯಿದೆ. ಈ ಪಂದ್ಯ ಮಧ‍್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಷ್ಯನ್ ಗೇಮ್ಸ್ ಕ್ರಿಕೆಟ್: ಫೈನಲ್ ಗೇರಿದ ಭಾರತ ಮಹಿಳಾ ತಂಡ, ಬಂಗಾರ ಗೆಲ್ಲುವ ಅವಕಾಶ