Publish Date: Fri, 15 Jan 2021 (10:17 IST)
Updated Date: Fri, 15 Jan 2021 (10:19 IST)
ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪೂರ್ಣ ಪ್ರಮಾಣದ ಸ್ಪಿನ್ನರ್ ಇಲ್ಲದೇ ಕಣಕ್ಕಿಳಿದಿದೆ.
ರವಿಚಂದ್ರನ್ ಅಶ್ವಿನ್ ಕೂಡಾ ಗಾಯದಿಂದಾಗಿ ಹೊರಗುಳಿದಿರುವುದರಿಂದ ಕುಲದೀಪ್ ಯಾದವ್ ಗೆ ಸ್ಥಾನ ನೀಡಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಕುಲದೀಪ್ ರನ್ನು ಕಡೆಗಣಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಕೂಡಾ ಕುಲದೀಪ್ ಗೆ ಸ್ಥಾನ ನೀಡದೇ ಇರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಟ್ವಿಟರಿಗರೂ ಟೀಂ ಇಂಡಿಯಾದ ನಿರ್ಧಾರವನ್ನು ಟೀಕಿಸಿದ್ದಾರೆ. ಈಗಿರುವ ಅನನುಭವಿ ಬೌಲಿಂಗ್ ಪಡೆ ಎದುರಾಳಿಗಳನ್ನು ಕಟ್ಟಿ ಹಾಕಲು ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಎಂದು ಕಾದು ನೋಡಬೇಕು.