Publish Date: Wed, 28 Sep 2022 (18:45 IST)
Updated Date: Wed, 28 Sep 2022 (18:46 IST)
ತಿರುವನಂತಪುರಂ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಇತ್ತೀಚೆಗಿನ ದಿನಗಳಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಗಳೇ ಹೆಚ್ಚು ಗೆಲುವು ಕಾಣುತ್ತಿದೆ. ಅಲ್ಲದೆ ತಿರುವನಂತಪುರಂನ ಪಿಚ್ ಸಮಯ ಕಳೆದಂತೆ ಬ್ಯಾಟಿಂಗ್ ಗೆ ಸಹಕಾರಿಯಾಗಬಲ್ಲದು. ಹೀಗಾಗಿ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಟೀಂ ಇಂಡಿಯಾ ಇಂತಿದೆ: ರೋಹಿತ್ ಶರ್ಮಾ, ಕೆಎಲ್ ರಾಹುಲ್,ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹರ್,ಅರ್ಷ್ ದೀಪ್ ಸಿಂಗ್.