Publish Date: Fri, 04 Dec 2020 (17:28 IST)
Updated Date: Fri, 04 Dec 2020 (17:29 IST)
ಕ್ಯಾನ್ ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 11 ರನ್ ಗಳಿಂದ ಗೆದ್ದುಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆಎಲ್ ರಾಹುಲ್ ಅರ್ಧಶತಕ (51) ಮತ್ತು ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ತ್ವರಿತ 44 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನತ್ತಿದ ಆಸೀಸ್ ಆರಂಭ ಉತ್ತಮವಾಗಿತ್ತು. ಮೊದಲ ವಿಕೆಟ್ ಗೆ 56 ರನ್ ಗಳಿಸಿದರೂ ಬಳಿಕ ದಾಳಿಗಿಳಿದ ಯಜುವೇಂದ್ರ ಚಾಹಲ್ ಮತ್ತು ಟಿ ನಟರಾಜನ್ ಎದುರಾಳಿಗಳನ್ನು ಸಂಪೂರ್ಣವಾಗಿ ನಿಯಂತ್ರಿಸಿದರು. ನಿಯಮಿತವಾಗಿ ವಿಕೆಟ್ ಕೀಳುತ್ತಿದ್ದ ಈ ಜೋಡಿ ಆಸ್ಟ್ರೇಲಿಯಾವನ್ನು ಸಂಪೂರ್ಣವಾಗಿ ಕಟ್ಟಿ ಹಾಕಿದರು. ಅಂತಿಮವಾಗಿ ಆಸೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಬೌಲರ್ ಗಳು ಈ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.