Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಪಾಕಿಸ್ತಾನ ಭಯೋತ್ಪಾದಕರಿಂದ ದಾಳಿ ಬೆದರಿಕೆ

Krishnaveni K
ಸೋಮವಾರ, 6 ಮೇ 2024 (11:57 IST)
Photo Courtesy: Twitter
ಮುಂಬೈ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ಮೂಲದ ಭಯೋತ್ಪಾದಕರಿಂದ ದಾಳಿ ಬೆದರಿಕೆ ಬಂದಿದೆ.

ಪ್ರೋ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ವಿಶ್ವಕಪ್ ವೇಳೆ ದಾಳಿ ನಡೆಸುವ ಬೆದರಿಕೆ ಬಂದಿದೆ. ಈ ಹಿನ್ನಲೆಯಲ್ಲಿ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜೂನ್ 2 ರಿಂದ  ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಜೂನ್ 9 ರಂದು ನ್ಯೂಯಾರ್ಕ್ ನಲ್ಲಿ ಪಂದ್ಯ ನಡೆಯಲಿದೆ.

ಭಾರತ-ಪಾಕ್ ಪಂದ್ಯಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುತ್ತಾರೆ. ಇಂತಹ ಸಂದರ್ಭದಲ್ಲೇ ದಾಳಿ ನಡೆಸಲು ಭಯೋತ್ಪಾದಕರು ಹೊಂಚು ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ನ ಸಿಇಒ ಜಾನಿ ಗ್ರೇವ್ಸ್ ನಾವು ಈ ಬಗ್ಗೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದಿದ್ದಾರೆ.

ಜೂನ್ 1 ರಿಂದ ಜೂನ್ 29 ರವರೆಗೆ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನ ವಿವಿಧ ತಾಣಗಳಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಈ ಬಾರಿ ಒಟ್ಟು 20 ತಂಡಗಳು ನಾಲ್ಕು ಗುಂಪುಗಳಾಗಿ ಕಣಕ್ಕಿಳಿಯುತ್ತಿದೆ. ಜೂನ್ 29 ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments