ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ನಿನ್ನೆ ತಮ್ಮ ಆರನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.
2017 ರ ಡಿಸೆಂಬರ್ 11 ರಂದು ಈ ಜೋಡಿ ಇಟೆಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನಿನ್ನೆಗೆ ಈ ವಿಶೇಷ ದಿನಕ್ಕೆ ಆರು ವರ್ಷ ತುಂಬಿತ್ತು. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಅವರಿಗೆ ಶುಭಾಶಯ ಕೋರಿದ್ದರು.
ತಮ್ಮ ವಿವಾಹ ವಾರ್ಷಿಕೋತ್ಸವವನ್ನು ವಿರುಷ್ಕಾ ದಂಪತಿ ಕುಟುಂಬಸ್ಥರು, ಸ್ನೇಹಿತರ ಜೊತೆ ಪಾರ್ಟಿ ಮಾಡುವ ಮೂಲಕ ಕಾಲ ಕಳೆದಿದ್ದಾರೆ. ಬಳಿಕ ಫೋಟೋ ಶೂಟ್ ಕೂಡಾ ಮಾಡಿಸಿಕೊಂಡಿದ್ದಾರೆ.
ಕೇಕ್ ಕಟಿಂಗ್ ವೇಳೆ ಕೊಹ್ಲಿ ಫನ್ನಿಯಾಗಿ ಪೋಸ್ ಕೊಟ್ಟಿದ್ದಾರೆ. ಇಬ್ಬರೂ ಈ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ತಮಗೆ ವಿಶೇಷ ದಿನಕ್ಕೆ ಶುಭ ಕೋರಿದ ಸ್ನೇಹಿತರು, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.