Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಹುಲ್ ದ್ರಾವಿಡ್ ದಾಖಲೆ ಮುರಿದ ಕೊಹ್ಲಿ, ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ಟೀಂ ಇಂಡಿಯಾ

ರಾಹುಲ್ ದ್ರಾವಿಡ್ ದಾಖಲೆ ಮುರಿದ ಕೊಹ್ಲಿ, ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ಟೀಂ ಇಂಡಿಯಾ
ಮೆಲ್ಬೋರ್ನ್ , ಗುರುವಾರ, 27 ಡಿಸೆಂಬರ್ 2018 (13:21 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದ ಎರಡನೇ ದಿನದಂತ್ಯಕ್ಕೆ ಆಸೀಸ್ ಮೊದಲ ಇನಿಂಗ್ಸ್ ಆರಂಭಿಸಿದ್ದು, ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ.


ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಗೆ 443 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಆಸೀಸ್ ಭಾರತದ ಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 435 ರನ್ ಗಳಿಸಬೇಕಿದೆ. ದಿನದಂತ್ಯಕ್ಕೆ ಮಾರ್ಕಸ್ ಹ್ಯಾರಿಸ್ 5 ರನ್ ಮತ್ತು ಏರನ್ ಫಿಂಚ್ 3 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಇದಕ್ಕೂ ಮೊದಲು ಮೊದಲ ಇನಿಂಗ್ಸ್ ನಲ್ಲಿ 82 ರನ್ ಗಳಿಗೆ ಔಟಾದ ಕೊಹ್ಲಿ ರಾಹುಲ್ ದ್ರಾವಿಡ್ ರ 16 ವರ್ಷ ಹಳೆಯ ದಾಖಲೆಯನ್ನು ಮುರಿದರು. ಒಂದೇ ವರ್ಷ ವಿದೇಶದಲ್ಲಿ ಅತೀ ಹೆಚ್ಚು ರನ್ ಗಳಿಸಿದ ದ್ರಾವಿಡ್ ದಾಖಲೆಯನ್ನು ಕೊಹ್ಲಿ ಮುರಿದರು. ದ್ರಾವಿಡ್ 2002 ರಲ್ಲಿ 1137 ರನ್ ಗಳಿಸಿ ಈ ದಾಖಲೆ ಮಾಡಿದ್ದರು. ಈಗ ಕೊಹ್ಲಿ ಆ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮಿಚೆಲ್ ಸ್ಟಾರ್ಕ್ ಸವಾಲು ಈಡೇರಲಿಲ್ಲ, ವಿರಾಟ್ ಕೊಹ್ಲಿ ಶತಕ ಸಿಡಿಸಲಿಲ್ಲ!