Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಂಡನ್: ತೊಡೆಸಂಧು ನೋವಿನಿಂದಾಗಿ ಮೊದಲ ಏಕದಿನ ಪಂದ್ಯದಿಂದ ಗೈರಾಗಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿ ಇಂದಿನ ಪಂದ್ಯಕ್ಕೂ ಅಲಭ್ಯರಾಗುವ ಸಾಧ‍್ಯತೆ ಹೆಚ್ಚಿದೆ.
ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಗಾಯದ ಕಾರಣದಿಂದ ಹೊರಗುಳಿದಿದ್ದರು. ಅವರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ತಂಡದ ಮೂಲದಿಂದ ತಿಳಿದುಬಂದಿದೆ.
ಹೀಗಾಗಿ ಇಂದಿನ ಪಂದ್ಯದಲ್ಲೂ ಆಡುವುದು ಅನುಮಾನವಾಗಿದೆ. ಸತತ ವೈಫಲ್ಯಕ್ಕೊಳಗಾಗಿರುವ ಕೊಹ್ಲಿ ಏಕದಿನ ಪಂದ್ಯದಲ್ಲಾದರೂ ಫಾರ್ಮ್ ಕಂಡುಕೊಳ್ಳುತ್ತಾರೆ ಎಂಬುದು ಅವರ ಅಭಿಮಾನಿಗಳ ನಿರೀಕ್ಷೆಯಾಗಿತ್ತು.