Webdunia - Bharat's app for daily news and videos

Install App

ಫಾರ್ಮ್ ಕಂಡುಕೊಂಡ ವಿರಾಟ್ ಕೊಹ್ಲಿ: ಗೆದ್ದ ಟೀಂ ಇಂಡಿಯಾ

Webdunia
ಸೋಮವಾರ, 15 ಮಾರ್ಚ್ 2021 (08:58 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಎಲ್ಲಕ್ಕಿಂತ ಮುಖ್ಯವಾಗಿ ಮಂಕಾಗಿದ್ದ  ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಎಂದಿನ ಫಾರ್ಮ್ ಪ್ರದರ್ಶಿಸಿ ಅಜೇಯ 73 ರನ್ ಗಳಿಸಿದರು.


ಟಾಸ್ ಗೆದ್ದು ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಈ ಮೊತ್ತವನ್ನು ಭಾರತ 17.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 166 ರನ್ ಗಳಿಸುವ ಮೂಲಕ ಗೆಲುವು ದಾಖಲಿಸಿತು.

ಭಾರತದ ಪರ ಬ್ಯಾಟಿಂಗ್ ನಲ್ಲಿ ಕೆಎಲ್ ರಾಹುಲ್ ಮತ್ತೆ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು. ಆದರೆ ಆರಂಭದಲ್ಲೇ ಸಿಕ್ಕ ಈ ಆಘಾತವನ್ನು ಮೆಟ್ಟಿ ನಿಂತ ಯುವ ಬ್ಯಾಟ್ಸ್ ಮನ್ ಇಶಾನ್ ಕಿಶನ್, ವಿರಾಟ್ ಕೊಹ್ಲಿ ಜೋಡಿ ಇಂಗ್ಲೆಂಡ್ ಬೌಲರ್ ಗಳನ್ನು ಮನಸೋ ಇಚ್ಛೆ ದಂಡಿಸಿತು. ಕಿಶನ್ ಚೊಚ್ಚಲ ಪಂದ್ಯದಲ್ಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕ ಗಳಿಸಿದರು. ಅವರು 4 ಸಿಕ್ಸರ್, 5 ಬೌಂಡರಿ ಸಹಿತ 32 ಎಸೆತಗಳಲ್ಲಿ 56 ರನ್ ಸಿಡಿಸಿ ಔಟಾದರು.

ಇನ್ನೊಂದೆಡೆ ವಿರಾಟ್ ಕೊಹ್ಲಿ ಕೊನೆಯವರೆಗೂ ಅಜೇಯರಾಗುಳಿದು 49 ಎಸೆತಗಳಲ್ಲಿ 73 ರನ್ ಗಳಿಸಿದರು. ರಿಷಬ್ ಪಂತ್ 13 ಎಸೆತಗಳಲ್ಲಿ 26 ರನ್ ಗಳಿಸಿ ಬಂದಷ್ಟೇ ವೇಗವಾಗಿ ನಿರ್ಗಮಿಸಿದರು. ಶ್ರೇಯಸ್ ಐಯರ್ ಅಜೆಯ 8 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments