Webdunia - Bharat's app for daily news and videos

Install App

Virat Kohli: ಲಂಡನ್ ನಲ್ಲಿ ಸೆಟಲ್ ಆದ ಮೇಲೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮರೆತಿದ್ದಾರೆ

Krishnaveni K
ಸೋಮವಾರ, 4 ನವೆಂಬರ್ 2024 (08:45 IST)
Photo Credit: X
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಅವಮಾನ ಎದುರಿಸಿದ ಮೇಲೆ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬ್ಯಾಟಿಂಗ್ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆ ಕೇಳಿಬಂದಿದೆ.

ಅದರಲ್ಲೂ ವಿಶ್ವ ಕ್ರಿಕೆಟ್ ನ ಕಿಂಗ್ ಎಂದು ಕರೆಯಿಸಿಕೊಳ್ಳುವ ವಿರಾಟ್ ಕೊಹ್ಲಿ ಇತ್ತೀಚೆಗೆ ಬ್ಯಾಟಿಂಗ್ ನ್ನೇ ಮರೆತಿದ್ದಾರೆ. ತಮ್ಮ ಮಗನ ಜನನದ ನಂತರ ಕೊಹ್ಲಿ ಲಂಡನ್ ನಲ್ಲಿಯೇ ಬೀಡುಬಿಟ್ಟಿದ್ದಾರೆ. ಇದಾದ ಬಳಿಕ ಅವರು ಬ್ಯಾಟಿಂಗ್ ನ್ನೇ ಮರೆತಿದ್ದಾರೆ ಎಂದು ಅನೇಕರು ಅಭಿಪ್ರಾಯಪಡುತ್ತಿದ್ದಾರೆ.

ಕುಟುಂಬ ಮತ್ತು ವೃತ್ತಿ ಬದುಕಿನ ನಡುವೆ ಸಮತೋಲನ ನಡೆಸುವುದರಲ್ಲಿ ಕೊಹ್ಲಿ ಸೋಲುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಕೇವಲ ಕ್ರಿಕೆಟ್ ಸರಣಿಗಳಿಗಾಗಿ ಮಾತ್ರ ಭಾರತಕ್ಕೆ ಬರುವ ಕೊಹ್ಲಿ ಉಳಿದೆಲ್ಲಾ ಸಮಯಗಳನ್ನು ಲಂಡನ್ ನಲ್ಲಿಯೇ ಪತ್ನಿ ಮಕ್ಕಳೊಂದಿಗೆ ಕಳೆಯುತ್ತಿದ್ದಾರೆ.

ವಿರಾಟ್ ಕೊಹ್ಲಿ ಶತಕ ಸಿಡಿಸುವುದಿರಲಿ, ಅವರ ಎಂದಿನ ಶೈಲಿಯ ಆಟ ಕಾಣದೇ ಎಷ್ಟೋ ಸಮಯವಾಗಿದೆ. ಹೀಗಾಗಿಯೇ ಕೌಟುಂಬಿಕ ಬದುಕಿನ ಜಂಜಾಟಗಳಲ್ಲಿ ತಮ್ಮ ಕ್ರಿಕೆಟ್ ಅಭ್ಯಾಸವನ್ನೇ ಮರೆತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಈಗಲೇ ಅವರ ನಿವೃತ್ತಿಗೆ ಒತ್ತಾಯಗಳು ಕೇಳಿಬರುತ್ತಿವೆ. ಮುಂದೆ ಆಸ್ಟ್ರೇಲಿಯಾ ವಿರುದ್ಧ ಮಹತ್ವದ ಟೆಸ್ಟ್ ಸರಣಿಯಿದ್ದು ಆಗಲೂ ಫ್ಲಾಪ್ ಆದಲ್ಲಿ ಅವರು ಇಷ್ಟು ದಿನ ಗಳಿಸಿದ ಪ್ರತಿಷ್ಠೆಯೆಲ್ಲವೂ ಕರಗಿ ಹೋಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

IPL 2025: ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಮುಖಭಂಗ: ಗುಜರಾತ್‌, ಆರ್‌ಸಿಬಿ, ಪಂಜಾಬ್‌ ತಂಡಗಳಿಗೆ ಪ್ಲೇಆಫ್‌ ಟಿಕೆಟ್‌

ಜೀವಬೆದರಿಕೆ ಬೆನ್ನಲ್ಲೇ ತಿರುಪತಿಗೆ ಟೀ ಇಂಡಿಯಾ ಕೋಚ್ ಭೇಟಿ, ಇಬ್ಬರು ಮಕ್ಕಳನ್ನು ಕೈಹಿಡಿದು ನಡೆದ ಗೌತಮ್ ಗಂಭೀರ್‌

ಮುಂದಿನ ಸುದ್ದಿ
Show comments