ದುಬೈ: 2019 ನೇ ಸಾಲಿನ ಶ್ರೇಷ್ಠ ಕ್ರಿಕೆಟಿಗರಿಗೆ ಐಸಿಸಿ ಪ್ರಶಸ್ತಿ ಘೋಷಣೆ ಮಾಡಿದ್ದು, ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಾಗಿದ್ದಾರೆ. ರೋಹಿತ್ ಶರ್ಮಾಗೆ ಶ್ರೇಷ್ಠ ಏಕದಿನ ಪ್ರಶಸ್ತಿ ಲಭಿಸಿದೆ.
ಕೊಹ್ಲಿ ನಾಯಕರಾಗಿರುವ ಐಸಿಸಿ ಟೆಸ್ಟ್ ತಂಡದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾಗೆ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸಿಕ್ಕಿದರೆ, ಆಸ್ಟ್ರೇಲಿಯಾದ ಪ್ಯಾಟ್ ಕ್ಯುಮಿನ್ಸ್ ಟೆಸ್ಟ್ ಆಟಗಾರನಾಗಿ ಹೊರಹೊಮ್ಮಿದ್ದಾರೆ.
ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಜಾಗತಿಕ ಕ್ರಿಕೆಟಿಗ ಪ್ರಶಸ್ತಿ ಪಡೆದಿದ್ದಾರೆ. ಟೀಂ ಇಂಡಿಯಾ ಯುವ ಬೌಲರ್ ದೀಪಕ್ ಚಹರ್ ಶ್ರೇಷ್ಠ ಟಿ20 ಪ್ರದರ್ಶನಕ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.