ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಟಿ20 ಕ್ರಿಕೆಟ್ ಆರಂಭವಾಗಲಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹೊಸ ದಾಖಲೆಯೊಂದು ಕಾಯುತ್ತಿದೆ.
ಕೆಲವು ದಿನಗಳಿಂದ ಕೊಹ್ಲಿಯಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಹೀಗಾಗಿ ಐಪಿಎಲ್ ಗೆ ಮೊದಲು ತಮ್ಮ ಫಾರ್ಮ್ ಕಂಡುಕೊಳ್ಳಲು ಕೊಹ್ಲಿ ಇದು ಉತ್ತಮ ಅವಕಾಶವಾಗಲಿದೆ.
ಒಂದು ವೇಳೆ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಇನ್ನು 72 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ ಬ್ಯಾಟ್ಸ್ ಮನ್ ಎಂಬ ದಾಖಲೆ ಮಾಡಲಿದ್ದಾರೆ. ಕೊಹ್ಲಿ 2,928 ರನ್ ಗಳಿಸಿದ್ದು, 25 ಅರ್ಧಶತಕ ಸಿಡಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 94 ರನ್.
ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಮಾಡಿರುವ ದಾಖಲೆಯ ಪಟ್ಟಿಯಲ್ಲಿ ನ್ಯೂಜಿಲೆಂಡ್ ನ ಮಾರ್ಟಿನ್ ಗುಪ್ಟಿಲ್ ಎರಡನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.