ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಆಸ್ಟ್ರೇಲಿಯಾ ಅಂಗಣದಲ್ಲಿ 1000 ಟೆಸ್ಟ್ ರನ್ ಗಳಿಸಿದ ಸಾಧನೆಯನ್ನು ಕೊಹ್ಲಿ ಮಾಡಿದ್ದಾರೆ. ಇದಕ್ಕೆ ಮೊದಲು ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಇದೇ ದಾಖಲೆ ಮಾಡಿದ್ದರು. ಇದೀಗ ಆ ಸಾಲಿಗೆ ಕೊಹ್ಲಿಯೂ ಸೇರಿಕೊಂಡಿದ್ದಾರೆ.
ಆದರೆ ಇವರೆಲ್ಲರಿಗಿಂತ ವೇಗವಾಗಿ ಕೊಹ್ಲಿ ಈ ಸಾಧನೆ ಮಾಡಿರುವುದು ವಿಶೇಷ. ತೆಂಡುಲ್ಕರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದರೂ ಅವರು 1000 ರನ್ ಗಳಿಸಲು 20 ಟೆಸ್ಟ್ ಆಡಬೇಕಾಗಿತ್ತು. ಆದರೆ ಕೊಹ್ಲಿ ಕೇವಲ 9 ಟೆಸ್ಟ್ ಪಂದ್ಯಗಳಿಂದ ಈ ಸಾಧನೆ ಮಾಡಿರುವುದು ವಿಶೇಷ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ