ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯಕ್ಕೆ ಸಮಕಾಲೀನ ಬ್ಯಾಟ್ಸ್ ಮನ್ ಗಳ ಪೈಕಿ ಸರ್ವ ಶ್ರೇಷ್ಠರು ಎಂದೇ ಹೇಳಲಾಗುತ್ತಿದೆ. ಹಾಗಿದ್ದರೂ ಕೊಹ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಅಲ್ಲಿನ ವೇಗಿ ಆಂಡರ್ಸನ್ ಎದುರು ತಿಣುಕಾಡಬಹುದು ಎಂದು ಮಾಜಿ ವೇಗಿ ಗ್ಲೆನ್ ಮೆಕ್ ಗ್ರಾತ್ ಅಭಿಪ್ರಾಯಪಟ್ಟಿದ್ದಾರೆ.
ಜುಲೈ ತಿಂಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡಲಿದ್ದು ಈ ಸಂದರ್ಭದಲ್ಲಿ ಐದು ಟೆಸ್ಟ್, ಏಕದಿನ ಮತ್ತು ಟಿ20 ಸರಣಿ ಆಡಲಿದೆ. ಈ ಸಂದರ್ಭದಲ್ಲಿ ಕೊಹ್ಲಿಗೆ ಇಂಗ್ಲೆಂಡ್ ಪರಿಸ್ಥಿತಿಗೆ ಹೊಂದಿಕೊಳ್ಳಲು ಕಷ್ಟವಾಗಬಹುದು ಎಂದು ಮೆಗ್ರಾತ್ ಹೇಳಿದ್ದಾರೆ.
‘ಕೊಹ್ಲಿ ಜಾಗತಿಕ ಕ್ರಿಕೆಟಿಗರ ಪೈಕಿ ಶ್ರೇಷ್ಠ ಆಟಗಾರ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಇಂಗ್ಲೆಂಡ್ ನ ಪರಿಸ್ಥಿತಿಯಲ್ಲಿ ಅಲ್ಲಿನ ಜೇಮ್ಸ್ ಆಂಡರ್ಸನ್ ನಂತಹ ಬೌಲರ್ ಗಳ ಎದುರು ಯಶಸ್ವಿಯಾಗಲು ಕೊಹ್ಲಿ ಕಠಿಣ ಪರಿಶ್ರಮಪಡಬೇಕಾದೀತು. ಎಲ್ಲಾ ಬೌಲರ್ ಗಳಂತೆ ಈತನ ಎದುರು ಇಲ್ಲಿನ ಪರಿಸ್ಥಿತಿಯಲ್ಲಿ ಸೀದಾ ಹೋಗಿ ಬ್ಯಾಟ್ ಬೀಸಿ ಬರಲು ಸಾಧ್ಯವಿಲ್ಲ. ಈ ಪಂದ್ಯ ನೋಡಲು ನಾನು ಕಾತುರನಾಗಿದ್ದೇನೆ’ ಎಂದು ಮೆಗ್ರಾತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.