Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಟಿ20 ವಿಶ್ವಕಪ್ ಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆರಂಭಿಕರು: ಹಾರ್ದಿಕ್ ಪಾಂಡ್ಯಗೆ ನೋ ಎಂಟ್ರಿ

Rohit Sharma-Virat Kohli

Krishnaveni K

ಮುಂಬೈ , ಬುಧವಾರ, 17 ಏಪ್ರಿಲ್ 2024 (14:57 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಹಾರ್ದಿಕ್ ಪಾಂಡ್ಯಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

ಇತ್ತೀಚೆಗಷ್ಟೇ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ನಡುವೆ ಮುಂಬರುವ ಟಿ20 ವಿಶ್ವಕಪ್ ತಂಡದ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ.  ಈ ವೇಳೆ ವಿರಾಟ್ ಕೊಹ್ಲಿ ಸ್ಥಾನದ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿಯಿದೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ಖಾಯಂ ಆರಂಭಿಕ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಆರಂಭಿಕರಾಗಿ ಆಡಿದ ಅನುಭವವಿದೆ. ಮಾತ್ರವಲ್ಲ, ಟಿ20 ಕ್ರಿಕೆಟ್ ನಲ್ಲಿ ಅವರು ಆರಂಭಿಕರಾಗಿ ಯಶಸ್ಸು ಗಳಿಸಿದ್ದಾರೆ ಕೂಡಾ. ಹೀಗಾಗಿ ಟಿ20 ವಿಶ್ವಕಪ್ ನಲ್ಲೂ ಅವರನ್ನು ಆರಂಭಿಕರಾಗಿಯೇ ಕಣಕ್ಕಿಳಿಸಲು ತೀರ್ಮಾನ ಮಾಡಲಾಗಿದೆ ಎಂಬ ಸುದ್ದಿಯಿದೆ.

ಇದೇ ವೇಳೆ ಆಲ್ ರೌಂಡರ್ ಹಾರ್ದಿಕ್‍ ಪಾಂಡ್ಯಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಹಾರ್ದಿಕ್ ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ಅವರು ಈಗಲೂ ಸಂಪೂರ್ಣವಾಗಿ ಬೌಲಿಂಗ್ ಮಾಡುತ್ತಿಲ್ಲ. ತಂಡಕ್ಕೆ ಕೇವಲ ಬ್ಯಾಟಿಗನಾಗಿ ಹಾರ್ದಿಕ್ ಅಗತ್ಯವಿಲ್ಲ. ಹೀಗಾಗಿ ಅವರ ಬದಲು ಟಿ20 ಮಾದರಿಯಲ್ಲಿ ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಯುವ ಆಲ್ ರೌಂಡರ್ ಶಿವಂ ದುಬೆ ಅವರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ.

ಇತ್ತ ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಕೂಡಾ ಬ್ಯಾಕಪ್ ಓಪನರ್ ಗಳಾಗಿ ತಂಡಕ್ಕೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಇದೀಗ ಐಪಿಎಲ್ ನಲ್ಲಿ ನಾಯಕತ್ವ ಮತ್ತು ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗಬಹುದಾಗಿದೆ. ಆದರೆ ಇಶಾನ್ ಕಿಶನ್ ಗೆ ಅವಕಾಶ ಸಿಗುವುದು ಅನುಮಾನ. ಮತ್ತೊಬ್ಬ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್ ಕಮ್ ಬ್ಯಾಕ್ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಗ್ರಸ್ಥಾನ ಭದ್ರಪಡಿಸಿಕೊಂಡ ರಾಯಲ್ಸ್, ಕೊನೆಯ ಸ್ಥಾನದಲ್ಲಿರುವ ಆರ್‌ಸಿಬಿಯ ಫ್ಲೇ ಆಫ್ ಹಾದಿ ಕಠಿಣ