Publish Date: Sat, 13 Mar 2021 (09:13 IST)
Updated Date: Sat, 13 Mar 2021 (09:15 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿ ಬೇಡದ ದಾಖಲೆಯನ್ನು ಮೈಮೇಲೆಳೆದುಕೊಂಡಿದ್ದಾರೆ.
ಕೊಹ್ಲಿ ನಿನ್ನೆಯ ಪಂದ್ಯದ ಮೂಲಕ 14 ನೇ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರೊಂದಿಗೆ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಸೌರವ್ ಗಂಗೂಲಿ ದಾಖಲೆಯನ್ನು ಮುರಿದಿದ್ದಾರೆ.
ಗಂಗೂಲಿ 13 ಬಾರಿ ಶೂನ್ಯ ಸಂಪಾದಿಸಿದ್ದರು. ಆ ದಾಖಲೆ ಈಗ ಕೊಹ್ಲಿ ಪಾಲಾಗಿದೆ. ರನ್ ಮೆಷಿನ್ ಸಾಕಷ್ಟು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಆದರೆ ಇದರ ಜೊತೆಗೆ ಈಗ ಬೇಡದ ದಾಖಲೆಯೊಂದೂ ಸೇರಿಕೊಂಡಿದೆ. ಇತ್ತೀಚೆಗಿನ ದಿನಗಳಲ್ಲಿ ಎಂದಿನ ಫಾರ್ಮ್ ಪ್ರದರ್ಶಿಸದ ಕೊಹ್ಲಿ ಬಗ್ಗೆ ಸಾಕಷ್ಟು ಟೀಕೆ ಕೇಳಿಬರುತ್ತಿದೆ. ಅದರಲ್ಲೂ ಸೀಮಿತ ಓವರ್ ಗಳ ಪಂದ್ಯದಲ್ಲಿ ಅವರು ನಾಯಕತ್ವ ತ್ಯಜಿಸಿ ಬ್ಯಾಟಿಂಗ್ ಬಗ್ಗೆ ಗಮನ ಹರಿಸಲಿ ಎಂಬ ಸಲಹೆಗಳು ಕೇಳಿಬರುತ್ತಿವೆ.