Publish Date: Sun, 04 Sep 2022 (07:29 IST)
Updated Date: Sun, 04 Sep 2022 (07:31 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ನ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.
ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆ ನಿಶ್ವಿತ. ಕಳೆದ ಪಂದ್ಯದ ಹೀರೋ ಹಾರ್ದಿಕ್ ಪಾಂಡ್ಯ ಪುನರಾಗಮನವಾಗುತ್ತಿರುವುದರಿಂದ ರಿಷಬ್ ಪಂತ್ ತಂಡದಿಂದ ಹೊರಗುಳಿಯುವುದು ಬಹುತೇಕ ಖಚಿತ. ದಿನೇಶ್ ಕಾರ್ತಿಕ್ ಮತ್ತೆ ಕೀಪಿಂಗ್ ಮಾಡಬೇಕಾಗಬಹುದು.
ಇನ್ನು, ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಗೆ ಸಾಥ್ ನೀಡಿದ್ದ ರವೀಂದ್ರ ಜಡೇಜಾ ಗಾಯದಿಂದಾಗಿ ಏಷ್ಯಾ ಕಪ್ ನಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಅನುಭವಿ ರವಿಚಂದ್ರನ್ ಅಶ್ವಿನ್ ಅಥವಾ ಅಕ್ಸರ್ ಪಟೇಲ್ ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಇಬ್ಬರೂ ಬೌಲಿಂಗ್ ಜೊತೆ ಬ್ಯಾಟಿಂಗ್ ನಲ್ಲೂ ಸಹಾಯಕವಾಗಬಲ್ಲರು. ಉಳಿದಂತೆ ಬೌಲಿಂಗ್ ನಲ್ಲಿ ಹೆಚ್ಚಿನ ಬದಲಾವಣೆ ಮಾಡುವುದು ಅನುಮಾನ.