Select Your Language

Notifications

webdunia
webdunia
webdunia
webdunia

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಆಡುತ್ತಿಲ್ಲ ಯಾಕೆ?

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಆಡುತ್ತಿಲ್ಲ ಯಾಕೆ?
ಹ್ಯಾಂಗ್ ಝೂ , ಗುರುವಾರ, 21 ಸೆಪ್ಟಂಬರ್ 2023 (09:46 IST)
Photo Courtesy: Twitter
ಹ್ಯಾಂಗ್ ಝೂ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯದಲ್ಲಿ ಇಂದು ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಖಾಯಂ ನಾಯಕಿ ಹರ್ಮನ್ ಪ್ರೀತ್ ಕೌರ್ ಆಡುತ್ತಿಲ್ಲ.

ಅವರ ಬದಲಿಗೆ ಸ್ಮೃತಿ ಮಂಧನಾ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅಷ್ಟಕ್ಕೂ ಹರ್ಮನ್ ಪ್ರೀತ್ ಕೌರ್ ಏಷ್ಯನ್ ಗೇಮ್ಸ್ ನಲ್ಲಿ ಆಡದೇ ಇರಲು ಕಾರಣವಿದೆ.

ಹಿಂದೆ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಹರ್ಮನ್ ಅಶಿಸ್ತಿನ ವರ್ತನೆ ತೋರಿದ್ದಕ್ಕೆ ಅವರಿಗೆ ಐಸಿಸಿ ಎರಡು ಪಂದ್ಯಗಳ ನಿಷೇಧ ಶಿಕ್ಷೆ ವಿಧಿಸಿದೆ. ಈ ಕಾರಣಕ್ಕೆ ಏಷ್ಯನ್ ಗೇಮ್ಸ್ ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಹರ್ಮನ್ ಆಡಲ್ಲ. ಒಂದು ವೇಳೆ ಭಾರತ ಫೈನಲ್ ಪ್ರವೇಶಿಸಿದರೆ ಆಗ ಹರ್ಮನ್ ತಂಡದ ನಾಯಕಿಯಾಗಿ ಕಮ್ ಬ್ಯಾಕ್ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಹಮ್ಮದ್ ಸಿರಾಜ್ ಮತ್ತೆ ವಿಶ್ವ ನಂ.1 ಬೌಲರ್