Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

Women's T20 WC: ಪಾಕಿಸ್ತಾನ ವಿರುದ್ಧ ಗೆಲ್ಲಲು ಭಾರತ ವನಿತೆಯರಿಗೆ ಸುಲಭ ಗುರಿ

Smriti Mandhana

Krishnaveni K

ದುಬೈ , ಭಾನುವಾರ, 6 ಅಕ್ಟೋಬರ್ 2024 (17:27 IST)
ದುಬೈ: ಮಹಿಳೆಯರ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಗೆಲ್ಲಲು ಭಾರತಕ್ಕೆ ಸುಲಭ ಗುರಿ ಸಿಕ್ಕಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನಿಯರು 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿದರು.

ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಸಂಪೂರ್ಣ ಹಳಿ ತಪ್ಪಿದ್ದ ಭಾರತ ಇಂದು ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿತು. 52 ರನ್ ಗಳಿಸುವಷ್ಟರಲ್ಲಿ ಪಾಕಿಸ್ತಾನ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಪಾಕಿಸ್ತಾನ ಪರ ನಿದಾ ದಾರ್ 28 ರನ್ ಗಳಿಸಿದ್ದೇ ಗರಿಷ್ಠ ಸ್ಕೋರ್.

ಭಾರತದ ಪರ ಅನುಭವಿ ರೇಣುಕಾ ಸಿಂಗ್ ಮತ್ತು ದೀಪ್ತಿ ಶರ್ಮಾ ಮಾರಕ ದಾಳಿ ಸಂಘಟಿಸಿದರು. ಈ ಪೈಕಿ ರೇಣುಕಾ 4 ಓವರ್ ಗಳಲ್ಲಿ 23 ರನ್ ನೀಡಿ 4 ವಿಕೆಟ್ ಕಬಳಿಸಿದರೆ ದೀಪ್ತಿ ಶರ್ಮಾ 4 ಓವರ್ ಗಳಲ್ಲಿ 24 ರನ್ ನೀಡಿ 3 ವಿಕೆಟ್ ಕಬಳಿಸಿದರು. ಉಳಿಂದತೆ ಆರುಂಧತಿ ರೆಡ್ಡಿ ಮತ್ತು ಶ್ರೇಯಾಂಕ ಪಾಟೀಲ್ ತಲಾ 1 ವಿಕೆಟ್ ಕಬಳಿಸಿದರು.

ಇದೀಗ ಭಾರತ ಬ್ಯಾಟಿಂಗ್ ಆರಂಭಿಸಿದ್ದು ವಿಕೆಟ್ ನಷ್ಟವಿಲ್ಲದೇ 4 ರನ್ ಗಳಿಸಿದೆ. ನಾಕೌಟ್ ಸುತ್ತಿಗೇರಬೇಕಾದರೆ ಭಾರತ ಇಂದಿನ ಪಂದ್ಯವನ್ನು ಭರ್ಜರಿ ಅಂತರದಿಂದ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ ಈಗ 106 ರನ್ ಗಳ ಸುಲಭ ಗುರಿಯನ್ನು ಭಾರತೀಯರು ಹೆಚ್ಚು ವಿಕೆಟ್ ಕಳೆದುಕೊಳ್ಳದೇ ಬೇಗನೇ ತಲುಪಲಿ ಎಂಬುದು ಅಭಿಮಾನಿಗಳ ಹಾರೈಕೆ.

Share this Story:

Follow Webdunia kannada

ಮುಂದಿನ ಸುದ್ದಿ

Women's T20 World Cup 2024: ಭಾರತಕ್ಕೆ ಸಾಧಾರಣ ಗುರಿ ನೀಡಿದ ಪಾಕಿಸ್ತಾನ