Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಫೈನಲ್: 2003 ರ ಲೆಕ್ಕ 2023 ರಲ್ಲಿ ಚುಕ್ತಾ?

Webdunia
ಭಾನುವಾರ, 19 ನವೆಂಬರ್ 2023 (08:10 IST)
Photo Courtesy: Twitter
ಅಹಮ್ಮದಾಬಾದ್: ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಇಂದು ಅಹಮ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

2003 ರಲ್ಲಿ ಇದೇ ರೀತಿಯ ಸನ್ನಿವೇಶವಿತ್ತು. ಆ ಕೂಟದಲ್ಲಿ ಲೀಗ್ ಪಂದ್ಯದಲ್ಲಿ ಮೊದಲು ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿ ಮತ್ತೆ ಫೈನಲ್ ನಲ್ಲಿ ಎರಡೂ ತಂಡಗಳು ಎದುರಾಗಿದ್ದವು. ಈ ಬಾರಿಯೂ ಅದೇ ಪುನರಾವರ್ತನೆಯಾಗಿದೆ. ಆದರೆ ಒಂದು ಬದಲಾವಣೆಯೆಂದರೆ ಅಂದು ಮೊದಲ ಪಂದ್ಯದಲ್ಲಿ ಮತ್ತು ಫೈನಲ್ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು.

ಆದರೆ ಈ ಬಾರಿ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾವನ್ನು ಮಣಿಸಿದ್ದ ಟೀಂ ಇಂಡಿಯಾ ಇದೀಗ ಫೈನಲ್ ನಲ್ಲೂ ಗೆಲ್ಲುವ ವಿಶ್ವಾಸದಲ್ಲಿದೆ. ಅಂದು ಸೌರವ್ ಗಂಗೂಲಿ ನೇತೃತ್ವದ ಟೀಂ ಇಂಡಿಯಾ ಫೈನಲ್ ನಲ್ಲಿ ಅನುಭವಿಸಿದ ಸೋಲಿಗೆ ಇಂದು 20 ವರ್ಷಗಳ ಬಳಿಕ ರೋಹಿತ್ ಶರ್ಮಾ ಬಳಗ ಸೇಡು ತೀರಿಸಿಕೊಳ್ಳುತ್ತಾ ಎಂದು ಕಾದು ನೋಡಬೇಕಿದೆ.

ಭಾರತಕ್ಕೆ ಇದು ನಾಲ್ಕನೇ ಏಕದಿನ ವಿಶ್ವಕಪ್ ಫೈನಲ್. ಇದಕ್ಕೆ ಮೊದಲು ಮೂರು ಬಾರಿ ಫೈನಲ್ ಗೇರಿತ್ತು. ಆ ಪೈಕಿ ಎರಡು ಬಾರಿ ಚಾಂಪಿಯನ್ ಮತ್ತು ಒಮ್ಮೆ ರನ್ನರ್ ಅಪ್ ಆಗಿತ್ತು. ಆಸ್ಟ್ರೇಲಿಯಾಕ್ಕೆ ಇದು ಎಂಟನೇ ಫೈನಲ್. ಅತೀ ಹೆಚ್ಚು ಐದು ಬಾರಿ ಪ್ರಶಸ್ತಿ ಗೆದ್ದ ದಾಖಲೆ ಆಸ್ಟ್ರೇಲಿಯಾದ್ದು. ಕೊನೆಯ ಬಾರಿಗೆ ವಿಶ್ವಕಪ್ ಗೆದ್ದಿದ್ದು 2015 ರಲ್ಲಿ.

ಸದ್ಯದ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಅದ್ಭುತ ಫಾರ್ಮ್ ನಲ್ಲಿದ್ದು, ಆಸೀಸ್ ಗೆ ಮೊದಲಿನಷ್ಟು ಸುಲಭದ ಎದುರಾಳಿಯಲ್ಲ. ಟೀಂ ಇಂಡಿಯಾವನ್ನು ಅದರದ್ದೇ ನೆಲದಲ್ಲಿ ಸೋಲಿಸುವುದೂ ಅಷ್ಟು ಸುಲಭದ ಮಾತಲ್ಲ. ಅಹಮ್ಮದಾಬಾದ್ ಮೈದಾನದಲ್ಲಿ ಶುಬ್ಮನ್ ಗಿಲ್, ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ಉತ್ತಮ ದಾಖಲೆ ಹೊಂದಿದ್ದಾರೆ.

ಟೀಂ ಇಂಡಿಯಾಗೆ ಪ್ರಮುಖವಾಗಿ ಕಂಟಕವಾಗಬಲ್ಲ ಆಟಗಾರರೆಂದರೆ ಗ್ಲೆನ್ ಮ್ಯಾಕ್ಸ್ ವೆಲ್, ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್. ಈ ಮೂವರೂ ಆಟಗಾರರೂ ಭಾರತದ ವಿರುದ್ಧ ಉತ್ತಮ ದಾಖಲೆ ಹೊಂದಿದ್ದಾರೆ. ಬೌಲಿಂಗ್ ನಲ್ಲಿ ವೇಗಿಗಳಿಗೆ ಸಹಕರಿಸಿದರೆ ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್ ವುಡ್ ಕಂಟಕವಾಗಬಹುದು. ಆದರೆ ಭಾರತದ ಸ್ಪಿನ್ ಅಸ್ತ್ರದ ಮುಂದೆ ಆಸೀಸ್ ಹಲವು ಬಾರಿ ಎಡವಿದ್ದಿದೆ. ಹಾಗಿದ್ದರೂ ಐಸಿಸಿ ಫೈನಲ್ ಗಳಲ್ಲಿ ಪಳಗಿರುವ ಆಸ್ಟ್ರೇಲಿಯಾವನ್ನು ಸೋಲಿಸುವುದು ಟೀಂ ಇಂಡಿಯಾಗೆ ಸವಾಲಾಗಲಿದೆ. ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ ಹಾಟ್ ಸ್ಟಾರ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments