Publish Date: Sat, 03 Jun 2023 (08:40 IST)
Updated Date: Sat, 03 Jun 2023 (08:51 IST)
ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ಲೆಕ್ಕಾಚಾರಗಳು ಶುರುವಾಗಿದೆ.
ಫೈನಲ್ ಪಂದ್ಯಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಪ್ರಮುಖ ಆಟಗಾರರ ಅನುಪಸ್ಥಿತಿ ಕಾಡಲಿದೆ. ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಅನುಪಸ್ಥಿತಿ ಕಾಡಲಿದೆ. ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಮತ್ತೊಬ್ಬ ಆಟಗಾರನಿಗೆ ಅವಕಾಶ ಸಿಗಲಿದೆ.
ಆರಂಭಿಕರಾಗಿ ರೋಹಿತ್-ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು. ಕೆಎಲ್ ರಾಹುಲ್ ಸ್ಥಾನಕ್ಕೆ ಹಿರಿಯ ಆಟಗಾರ ಅಜಿಂಕ್ಯಾ ರೆಹಾನೆ ಆಡಲಿಳಿಯಬಹುದು. ಬಹಳ ದಿನಗಳ ನಂತರ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವುದರಿಂದ ರಾಹುಲ್ ಸ್ಥಾನ ಅವರು ಭರ್ತಿ ಮಾಡಬಹುದು. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಗೆ ಅವಕಾಶ ಸಿಗಲಿದೆ. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಸ್ಥಾನ ಪಡೆಯುವುದು ಬಹುತೇಕ ಖಚಿತ.