ದಿ ಓವಲ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಈ ಪಿಚ್ ವೇಗಿಗಳ ಸ್ವರ್ಗ ಎನ್ನಲಾಗಿದೆ. ಈ ಕಾರಣಕ್ಕೆ ಭಾರತ ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ವಿಶೇಷವೆಂದರೆ ಟೆಸ್ಟ್ ನಲ್ಲಿ ಹಲವು ಬಾರಿ ಆಪತ್ ಬಾಂಧವರಾಗಿದ್ದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರನ್ನೇ ಹೊರಗಿಡಲಾಗಿದೆ. ರವೀಂದ್ರ ಜಡೇಜಾ ಏಕೈಕ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ತಂಡದಲ್ಲಿದ್ದಾರೆ.
ಉಳಿದಂತೆ ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕ್ಯುಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜ, ಸ್ಟೀವ್ ಸ್ಮಿತ್, ಲಬುಶೇನ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರೀ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಥನಲ್ ಲಿಯನ್, ಸ್ಕಾಟ್ ಬೊಲಾಂಡ್.