Publish Date: Wed, 21 Sep 2022 (16:57 IST)
Updated Date: Wed, 21 Sep 2022 (16:59 IST)
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆಯುವುದೆಂದು ಈ ಮೊದಲೇ ತೀರ್ಮಾನವಾಗಿತ್ತು.
ಆದರೆ ಈ ಬಾರಿ ಅಂದರೆ 2023 ರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಲಾರ್ಡ್ಸ್ ಮೈದಾನದಿಂದ ಸ್ಥಳಾಂತರಗೊಂಡಿದೆ. ಈ ಬಾರಿ ಓವಲ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ ಎಂದು ಐಸಿಸಿ ಪ್ರಕಟಣೆ ತಿಳಿಸಿದೆ.
2025 ರ ವಿಶ್ವ ಚಾಂಪಿಯನ್ ಶಿಪ್ ಲಾರ್ಡ್ಸ್ ಅಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ನಡೆಯುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸದ್ಯಕ್ಕೆ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, ದ.ಆಫ್ರಿಕಾ ಎರಡನೇ ಸ್ಥಾನದಲ್ಲಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ಫೈನಲ್ ಪಂದ್ಯ ಆಡುತ್ತವೆ. ಸದ್ಯಕ್ಕೆ ಟೀಂ ಇಂಡಿಯಾಗೆ ಅಂಕ ಸುಧಾರಿಸಲು ಇನ್ನೂ ಅವಕಾಶಗಳಿವೆ.